ನ್ಯಾ.ಬಿ.ವೀರಪ್ಪ ಅವರು ಈಗಿನ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದಾರೆಯೇ ಹೊರತು ಬಿಜೆಪಿ ಬಗ್ಗೆ ಹೇಳಿಲ್ಲ. ಇದು ಮಾಧ್ಯಮಗಳಲ್ಲೇ ಬಂದ ಸುದ್ದಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ವಿಧಾನಸೌಧದ ಬಳಿ ಶುಕ್ರವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ಕರ್ನಾಟಕದ ಕಾಂಗ್ರೆಸ್ ಸರ್ಕಾರದ 63 ಪರ್ಸೆಂಟ್ ಭ್ರಷ್ಟಾಚಾರದ ಬಗ್ಗೆ ಹೇಳಿದ್ದಾರೆ. ಅವರು ಹಿಂದಿನ ಬಿಜೆಪಿ ಸರ್ಕಾರ ಎಂದು ಎಲ್ಲೂ ಉಲ್ಲೇಖಿಸಿಲ್ಲ. 2019 ಎಂದು ಪ್ರಸ್ತಾಪ ಮಾಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಹೇಳುವ ಮುನ್ನ ಅವರ ಮಾತಿನ ವೀಡಿಯೋ ನೋಡಲಿ. ಸಿದ್ದರಾಮಯ್ಯನವರೇ ಎಲ್ಲವನ್ನೂ ಊಹೆ ಮಾಡುವುದು ಬೇಡ.