ಮುಖ್ಯಮಂತ್ರಿಗಳು ಖಾಲಿ ಹುದ್ದೆಗಳ ಭರ್ತಿ ಮಾಡಿಕೊಳ್ಳುವ ಭರವಸೆ ನೀಡಿದ್ದು, 15 ದಿನಗಳಲ್ಲಿ ನೋಟಿಫಿಕೇಶನ್ ಹೊರಡಿಸದಿದ್ದರೇ ಮುಂದಿನ ಹೋರಾಟ ಕುರಿತು ನಿರ್ಧರಿಸಲಾಗುವುದು ಎಂದು ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಸಂಚಾಲಕ ಸಿದ್ದಲಿಂಗ ಬಾಗೇವಾಡಿ ಹೇಳಿದರು. ನಗರದಲ್ಲಿ ಶುಕ್ರವಾರ ಮಧ್ಯಾಹ್ನ 2ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ 24,300 ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮೋದ