ಕಾರವಾರ: ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಚೇರಿಯಲ್ಲಿ ಉಚಿತ ಕಾನೂನು ಸಲಹಾ ಕೇಂದ್ರ ಉದ್ಘಾಟನೆ: ವೀರ ಪರಿವಾರಕ್ಕೆ ನೆರವು
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ 'ವೀರ ಪರಿವಾರ ಸಹಾಯತಾ ಯೋಜನೆ, 2025' ಅಡಿಯಲ್ಲಿ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಚೇರಿಯಲ್ಲಿ ಉಚಿತ ಕಾನೂನು ಸಲಹಾ ಕೇಂದ್ರವನ್ನು ರವಿವಾರ ಸಂಜೆ 3.30ಕ್ಕೆ ಉದ್ಘಾಟಿಸಲಾಯಿತು. ದೇಶಕ್ಕಾಗಿ ಹೋರಾಡುವ ಸೈನಿಕರು ಹಾಗೂ ಅವರ ಕುಟುಂಬಗಳಿಗಾಗಿ ಈ ಕೇಂದ್ರವನ್ನು ಸ್ಥಾಪಿಸಲಾಗಿದೆ. ಇದೇ ದಿನ ರಾಜ್ಯದ ಇನ್ನೂ ಹತ್ತು ಜಿಲ್ಲೆಗಳಲ್ಲಿ ಇಂತಹ ಕೇಂದ್ರಗಳನ್ನು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರು, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅನು ಶಿವರಾಮನ್ ಅವರು ಮೈಸೂರಿನಿಂದ ಆನ್ಲೈನ್ ಮೂಲಕ ಉದ್ಘಾಟಿಸಿದರು.