ದಾವಣಗೆರೆ: ದಾವಣಗೆರೆ : ಹಾವೇರಿಯ ರಾಣೇಬೆನ್ನೂರು ತಾಲೂಕುನರಸೀಪುರ ಗ್ರಾಮದ ಅಂಬಿಗರ ಚೌಡಯ್ಯ ಗುರುಪೀಠಕ್ಕೆ ದಾವಣಗೆರೆ ಬಿಜೆಪಿ ಅಭ್ಯರ್ಥಿ ಭೇಟಿ
.ದಾವಣಗೆರೆ : ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕು ನರಸೀಪುರ ಗ್ರಾಮದ ಅಂಬಿಗರ ಚೌಡಯ್ಯ ಗುರುಪೀಠಕ್ಕೆ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರು ಭೇಟಿ ನೀಡಿ ಲಿಂಗೈಕ್ಯ ಶ್ರೀ ಶಾಂತಮುನಿ ಶ್ರೀಗಳ ಗದ್ದಿಗೆಗೆ ಪೂಜೆ ಸಲ್ಲಿಸಿದರು. ಬಳಿಕ ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಅವರಿಗೆ ಗೌರವ ಸಲ್ಲಿಸಿ, ಆಶೀರ್ವಾದ ಪಡೆದರು. ಹರಿಹರ ಬಿಜೆಪಿ ಶಾಸಕರಾದ ಬಿ.ಪಿ.ಹರೀಶ್, ಮುಂಖಡರಾದ ಶಿವಣ್ಣ, ಜಯ್ಯಮ್ಮ, ಬಿಜೆಪಿಯ ಹಿರಿಯ ಮುಂಖಡರಾದ ಕೆಂಚನಹಳ್ಳಿ ಮಾತೇಶಪ್ಪ ಸೇರಿದಂತೆ ಮತ್ತಿತರರು ಇದ್ದರು.