ಸಿರಗುಪ್ಪ: ಸಿರಿಗೇರಿ ಗ್ರಾಮದಲ್ಲಿ ಹೆಲ್ಮೆಟ್ ಜಾಗೃತಿ ಅಭಿಯಾನ
ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಸಿರಿಗೇರಿ ಗ್ರಾಮದಲ್ಲಿ ಸಿರಿಗೇರಿ ಪೊಲೀಸ್ ಠಾಣೆ ವತಿಯಿಂತಿ ಹೆಲ್ಮೇಟ್ ಜಾಗೃತಿಯನ್ನು ಶನಿವಾರ ಸಂಜೆ 6ಗಂಟೆಗೆ ಮೂಡಿಸಿದರು. ಬಳ್ಳಾರಿ ಜಿಲ್ಲೆಯಲ್ಲಿ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಇಲ್ಲದಿದ್ದರೆ ದಂಡ ಕಟ್ಟಬೇಕಾಗುತ್ತದೆ. ಪ್ರತಿಯೊಬ್ಬ ಬೈಕ್ ಸವಾರರು ಹೆಲ್ಮೆಟ್ ಧರಿಸಿ, ತಮ್ಮ ಜೀವ ರಕ್ಷಣೆಗೆ ಮುಂದಾಗಬೇಕು ಎಂದು ಶಿರಿಗೇರಿ ಪೊಲೀಸ್ ಠಾಣೆಯ ಪಿಎಸ್ಐ ಸದ್ದಾಂ ಹೇಳಿದ್ರು. ಈ ಸಂದರ್ಭದಲ್ಲಿ ಠಾಣೆಯ ಸಿಬ್ಬಂದಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಅನೇಕರು ಹಾಜರಿದ್ದರು.