ಬೆಂಗಳೂರು ಉತ್ತರ: ನಟ ಉಮೇಶ್ ಆರೋಗ್ಯ ವಿಚಾರಿಸಿದ ಹಿರಿಯ ಕಲಾವಿದರು
ಹಿರಿಯ ನಟ ಎಂಎಸ್ ಉಮೇಶ್ (Umesh) ಮನೆಯಲ್ಲಿ ಕಾಲುಜಾರಿ ಬಿದ್ದು ಸೊಂಟ ಹಾಗೂ ಬಲಗೈ ಭುಜಕ್ಕೆ ಪೆಟ್ಟು ಮಾಡಿಕೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ.ಹಿರಿಯ ನಟ ಉಮೇಶ್ ಅವರಿಗೆ ಎಂಆರ್ಐ ಹಾಗೂ ಸಿಟಿ ಸ್ಕ್ಯಾನಿಂಗ್ ಮಾಡಿದ ಬಳಿಕ ಲಿವರ್ನಲ್ಲಿ ಘನಗಾತ್ರದ ಗೆಡ್ಡೆ ಪತ್ತೆಯಾಗಿದೆ. ಲಿವರ್ ಕ್ಯಾನ್ಸರ್ ಆಗಿ ಅದು ಬೇರೆ ಬೇರೆ ಅಂಗಗಳಿಗೆ ಹರಡಿದೆ ಎಂದು ಶಾಂತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ನಟ ಉಮೇಶ್ ಅವರ ಆರೋಗ್ಯವನ್ನ ವಿಚಾರಿಸಿದ್ದಾರೆ ಹಿರಿಯ ಕಲಾವಿದರು.