ಸಕಲೇಶಪುರ: ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕಿಲೋ ಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್
ಶಿರಾಡಿ ಘಾಟ್ ರಸ್ತೆಯಲ್ಲಿ ಕಿಲೋಮೀಟರ್ ಗಟ್ಟಲೇ ಸರತಿ ಸಾಲಿನಲ್ಲಿ ನಿಂತ ವಾಹನಗಳು ಪ್ರಯಾಣಿಕರ ಪರದಾಟ ಹಾಸನ : ಸಾಲು-ಸಾಲು ರಜೆ ಮುಗಿದ ಹಿನ್ನಲೆಯಲ್ಲಿ ಸಾರ್ವಜನಿಕರು ತಮ್ಮ ಊರುಗಳಿಗೆ ವಾಪಾಸ್ ಆಗುತ್ತಿರುವ ಕಾರಣ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಘಾಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಸಕಲೇಶಪುರ ತಾಲ್ಲೂಕಿನ, ದೋಣಿಗಾಲ್ ಬಳಿ ಕಿಲೋಮೀಟರ್ ಗಟ್ಟಲೆ ವಾಹನಗಳು ಸರತಿ ಸಾಲಿನಲ್ಲಿ ನಿಂತಿದ್ದು ಟ್ರಾಫಿಕ್ ಜಾಮ್ನಲ್ಲಿ ಸಿಲುಕಿ ವಾಹನ ಸವಾರರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.ಇನ್ನು ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಲು ಪೊಲೀಸರ ಹರಸಾಹಸ ಪಡುತ್ತಿದ್ದಾರೆ.