ತುರುವೇಕೆರೆ: ತುಮಕೂರಿನ ಕಾಂಗ್ರೆಸ್ ಶಾಸಕರ ವಿರುದ್ಧ ಗುಡುಗಿದ ಜೆಡಿಎಸ್ ಶಾಸಕ ಎಂ ಟಿ ಕೃಷ್ಣಪ್ಪ
ಹೇಮಾವತಿ ಲಿಂಕ್ ಕೆನಾಲ್ ಹೋರಾಟದ ಪೂರ್ವಭಾವಿ ಸಭೆಯಲ್ಲಿ ತುರುವೇಕೆರೆ ಕ್ಷೇತ್ರದ ಶಾಸಕ ಎಂ.ಟಿ. ಕೃಷ್ಣಪ್ಪ ಅವರು ತುಮಕೂರು ಜಿಲ್ಲೆಯ ಕಾಂಗ್ರೆಸ್ ಶಾಸಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹೇಮಾವತಿ ವಿಚಾರದಲ್ಲಿ ಕಾಂಗ್ರೆಸ್ ಶಾಸಕರಿಗೆ ಮಾತನಾಡುವ ಧೈರ್ಯವಿಲ್ಲ, ನಮ್ಮ ನೀರನ್ನು ಉಳಿಸಿಕೊಳ್ಳಲು ಅವರಿಂದ ಸಾಧ್ಯವಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ರೈತರು ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಅವರು ಹೇಳಿದ್ದಾರೆ....