ಚಿತ್ತಾಪುರ: ನಿರಂತರ ಮಳೆ: ಮಾಲಗತ್ತಿ ಗ್ರಾಮದಲ್ಲಿ ಪ್ರವಾಹ ಪರಿಸ್ಥಿತಿ
ಕಲಬುರಗಿ : ಕಲಬುರಗಿ ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರಿದಿದೆ.. ನಿರಂತರ ಮಳೆಯಿಂದ ಚಿತ್ತಾಪುರ ತಾಲೂಕಿನ ಮಾಲಗತ್ತಿ ಗ್ರಾಮದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಸೆಪ್ಟೆಂಬರ್ 23 ರಂದು ಮಧ್ಯಾನ 3 ಗಂಟೆಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.. ಧಾರಕಾರ ಮಳೆಯಿಂದಾಗಿ ಗ್ರಾಮದ ಸುತ್ತಮುತ್ತಲಿನ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಕೆರೆ ಕಟ್ಟೆಗಳು ಒಡೆದು ನೂರಾರು ಎಕರೆ ಪ್ರದೇಶದಲ್ಲಿನ ಬೆಳೆಗಳು ಜಲಾವೃತವಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ..