ಕಲಬುರಗಿ: ಕಲಬುರಗಿಯಲ್ಲಿ ಭೀಕರ ಅಪಘಾತ: ಲಾರಿ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಬೀರನಳ್ಳಿ ಕ್ರಾಸ್ ಬಳಿ ಈರುಳ್ಳಿ ತುಂಬಿದ ಟ್ರಕ್ ಹಾಗೂ ಸಿಮೆಂಟ್ ಮಿಕ್ಸರ್ ಲಾರಿ ನಡುವೆ ಅಪಘಾತ ಸಂಭವಿಸಿದೆ. ಇಬ್ಬರು ಚಾಲಕರು ಗಂಭೀರವಾಗಿ ಗಾಯಗೊಂಡಿದ್ದು, ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ.