ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರು, ನಗರದಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಗುರುವಾರ 9 ಗಂಟೆಗೆ ಜನಸ್ಪಂದನ ಕಾರ್ಯಕ್ರಮ ನಡೆಸಿದರು. ಗ್ರಾಮೀಣ ಕ್ಷೇತ್ರದ ಸಾರ್ವಜನಿಕರು ಬಂದು ವಿವಿಧ ಅಹವಾಲುಗಳು, ಬೇಡಿಕೆಗಳು ಮತ್ತು ಮನವಿಗಳನ್ನು ಶಾಸಕ ಬಸವರಾಜ ಮತ್ತಿಮಡು ಅವರು ಸ್ವತಃ ಆಲಿಸಿ ತಕ್ಷಣ ಸ್ಪಂದಿಸುವ ಕೆಲಸ ಮಾಡಿದರು.