ಹುಬ್ಬಳ್ಳಿ ನಗರ: ಹುಬ್ಬಳ್ಳಿಯ ಜೈನ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯೋತ್ಸವ: ದೇಶಿ ಕ್ರೀಡೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ
.
ಹುಬ್ಬಳ್ಳಿ: ನಗರದ ಹೆಬ್ಬಳ್ಳಿ ರಸ್ತೆ ಉಣಕಲ್ ನಲ್ಲಿರುವ ಜೈನ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯೋತ್ಸವ ನಿಮಿತ್ತವಾಗಿ ಕನ್ನಡ ನಾಡಿನ ಸಂಸ್ಕೃತಿ ಮತ್ತು ಪರಂಪರೆಯನ್ನು ಬೆಳಗಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗಾಗಿ ದೇಶಿ ಕ್ರೀಡೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಈ ಇಲ್ಲಿನ ಕಾಲೇಜಿನ ಆವರಣದಲ್ಲಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಪ್ರಶಾಂತ ಬಣಕಾರ್ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿ, ಕರ್ನಾಟಕ ರಾಜ್ಯೋತ್ಸವ ನಮ್ಮ ನಾಡ ಹಬ್ಬವಾಗಿದ್ದು ಕನ್ನಡ ನಾಡಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮದಿದೆ. ಕನ್ನಡ ನಾಡಿನಲ್ಲಿ ಕನ್ನಡಿಗನೇ ಸಾರ್ವಭೌಮ ಎಂದರು.