ಮಧುಗಿರಿ: ಮಧುಗಿರಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಶೌಚಾಲಯದಲ್ಲಿ ಮಹಿಳೆ ಮೇಲೆ ಹಲ್ಲೆಗೆ ಯತ್ನ
ಮಧುಗಿರಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಶೌಚಾಲಯದಲ್ಲಿ ಫೋನ್-ಪೇ ಹಣ ಪಾವತಿ ವಿಚಾರವಾಗಿ ಮಹಿಳೆಯ ಮೇಲೆ ಹಲ್ಲೆಗೆ ಮುಂದಾದ ಸಿಬ್ಬಂದಿಯ ವಿಡಿಯೋ ವೈರಲ್ ಆಗಿದೆ. ಸಿಬ್ಬಂದಿಯ ಈ ದರ್ಪಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಅಧಿಕಾರಿಗಳ ಮೌನದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.