ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಮಾಜಿ ಸಚಿವರಾದ ಶ್ರೀ ಭೀಮಣ್ಣ ಖಂಡ್ರೆ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಡೆದು, ನಾಡಿನ ಮಹಾ ನಾಯಕನಿಗೆ ಅಂತಿಮ ನಮನ ಸಲ್ಲಿಸಿದರು. ಶನಿವಾರ ಮಧ್ಯಾಹ್ನ 2 ಗಂಟೆಗೆ ಸರ್ಕಾರಿ ಗೌರವದೊಂದಿಗೆ ನಡೆದ ಅಂತ್ಯಕ್ರಿಯೆಯಲ್ಲಿ ಡಿಕೆ ಶಿವಕುಮಾರ್ ಅವರು ಭಾಗವಹಿಸಿ, ಭೀಮಣ್ಣ ಖಂಡ್ರೆ ಅವರ ಸೇವೆಯನ್ನು ಸ್ಮರಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಟೇಲ್, ಈಶ್ವರ್ ಖಂಡ್ರೆ, ಮತ್ತಿತರರು ಹಾಜರಿದ್ದರು