ಶಿವಮೊಗ್ಗ: ಜಿಲ್ಲಾಯ ಪ್ರಧಾನ ಜಿಲ್ಲಾ ನ್ಯಾ.ಮಂಜುನಾಥ್ ನಾಯಕ್ ಬೆಳಗಾವಿಗೆ ವರ್ಗಾವಣೆ
ಶಿವಮೊಗ್ಗ ಜಿಲ್ಲೆಯ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಮಂಜುನಾಥ್ ನಾಯಕ್ ಅವರನ್ನು ಬೆಳಗಾವಿ ಜಿಲ್ಲೆಯ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶರಾಗಿ ಉಚ್ಚ ನ್ಯಾಯಾಲಯವು ವರ್ಗಾವಣೆ ಮಾಡಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.ಈ ಕುರಿತಾದ ಮಾಹಿತಿಯು ಭಾನುವಾರ ಲಭ್ಯವಾಗಿದ್ದು, ನವೆಂಬರ್ 5 ರಂದು ಬೆಳಗಾವಿಗೆ ತೆರಳಿ ಅಲ್ಲಿ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶರಾಗಿ ಮಂಜುನಾಥ್ ನಾಯಕ್ ಪದಗ್ರಹಣ ಮಾಡಲಿದ್ದಾರೆ.