ಕಲಬುರಗಿ: ರಾಷ್ಟ್ರೀಯ ಏಕತಾ ದಿವಸ: ನಗರದಲ್ಲಿ ಪೊಲೀಸ್ ಇಲಾಖೆಯಿಂದ ಪ್ರತಿಜ್ಞಾವಿಧಿ
ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ರಾಷ್ಟ್ರೀಯ ಏಕತಾ ದಿವಸದ ಅಂಗವಾಗಿ ಸಿಬ್ಬಂದಿಗಳಿಗೆ ಏಕತಾ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಜೊತೆಗೆ ಪೊಲೀಸ್ ಸಿಬ್ಬಂದಿಯಲ್ಲಿ ದೇಶಭಕ್ತಿ ಮತ್ತು ದೈಹಿಕ ಚೇತನತೆ ಬೆಳೆಸುವ ಉದ್ದೇಶದಿಂದ ಮ್ಯಾರಥಾನ್ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಉತ್ಸಾಹದಿಂದ ಭಾಗವಹಿಸಿದರು ಎಂದು ಶುಕ್ರವಾರ 9 ಗಂಟೆಗೆ ಪೊಲೀಸರು ಮಾಹಿತಿ ನೀಡಿದ್ದಾರೆ....