ಬೆಂಗಳೂರು ಉತ್ತರ: ಮನರೇಗಾ ಚರ್ಚೆಗೆ ವಿರೋಧ ಪಕ್ಷಗಳ ಪಂಥಹ್ವಾನ ಸ್ವೀಕರಿಸುವೆ, ಯಾವಾಗ, ಎಲ್ಲಿಗೆ ಬೇಕಾದರೂ ಸಿದ್ಧ: ನಗರದಲ್ಲಿ ಡಿಸಿಎಂ
ಮನರೇಗಾ ವಿಚಾರವಾಗಿ ಬಹಿರಂಗ ಚರ್ಚೆ ಮಾಡುವ ವಿರೋಧ ಪಕ್ಷಗಳ ಪಂಥಾಹ್ವಾನವನ್ನು ನಾನು ಸ್ವೀಕರಿಸುವೆ. ಅವರು ಯಾವಾಗ ಬೇಕಾದರೂ ಯಾವುದೇ ವೇದಿಕೆಯಲ್ಲಾದರೂ ಚರ್ಚೆ ಬರಲಿ, ನಾನು ಸಿದ್ಧ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿದರು. ಅರಮನೆ ಮೈದಾನದಲ್ಲಿ ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಮಾಧ್ಯಮಗಳ ಜೊತೆ ಮನರೇಗಾ ವಿಚಾರವಾಗಿ ಪ್ರತಿಭಟನೆ ಬಗ್ಗೆ ಕೇಳಿದಾಗ, ಮಾತನಾಡಿದ ಅವರು, "ನಾವು ಅದನ್ನು ತೀರ್ಮಾನ ಮಾಡುತ್ತೇವೆ. ವಿರೋಧ ಪಕ್ಷದವರು ಚರ್ಚೆಗೆ ಸಿದ್ಧ ಎಂದಿದ್ದಾರೆ. ಅವರು ಯಾವುದೇ ಮಾಧ್ಯಮ ವೇದಿಕೆಯಲ್ಲಾದರೂ, ಯಾವಾಗ ಕರೆದರೂ ನಾನು ಚರ್ಚೆಗೆ ಬರುತ್ತೇನೆ" ಕುಮಾರಸ್ವಾಮಿ ಚರ್ಚೆಗೆ ಬಂದರೆ ಬಹಳ ಒಳ್ಳೆಯದು, ನಾನು ಸ್ವಾಗತಿಸುವೆ ಎಂದರು.