ಭೂ ಒಡೆತನ ಯೋಜನೆಗಾಗಿ ಅರ್ಜಿದಾರರು ಹಾಗೂ ಜಮೀನು ಮಾಲೀಕರು ದಾಖಲೆ ಸಲ್ಲಿಸಲು ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಸೂಚನೆ ನೀಡಿದ್ದಾರೆ. ಮಂಗಳವಾರ ಸಂಜೆ 5 ಗಂಟೆಗೆ ಈ ಬಗ್ಗೆ ಇಲಾಖೆ ಮಾಹಿತಿ ನೀಡಿದೆ. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮಗಳ ವತಿಯಿಂದ 2025-26ನೇ ಸಾಲಿನಲ್ಲಿ ಭೂ ಒಡೆತನ ಯೋಜನೆಯಡಿ ಜಮೀನು ಕೋರಿ ಆನ್-ಲೈನ್ನಲ್ಲಿ ಅರ್ಜಿ ಸಲ್ಲಿಸಿರುವ ಮಹಿಳಾ ಅರ್ಜಿದಾರರು ಹಾಗೂ ಜಮೀನು ಮಾಲೀಕರು 2026ರ ಜನವರಿ 31ರೊಳಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕಾಗಿದೆ