ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಬರುವ ಮುಳ್ಳಯ್ಯನಗಿರಿ ಒಂದು ವಾರ ಪ್ರವಾಸಿಗರಿಗೆ ನಿರ್ಬಂಧ ಹಾಕಲಾಗಿದೆ.ಈ ಕುರಿತು ಸೋಮವಾರ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾಹಿತಿ ನೀಡಿದ್ದಾರೆ.ಗಿರಿಭಾಗದಲ್ಲಿ ಅಲ್ಲಲ್ಲಿ ಗುಡ್ಡಕುಸಿತ ಹಾಗುಜ ರಸ್ತೆಯ ಪಕ್ಕದಲ್ಲಿ ಕೊರಕಲು ಬಿದ್ದಿರುವ ಕಾರಣ ಲೋಕಪಯೋಗಿ ಇಲಾಖೆ ಕಾಮಗಾರಿ ನಡೆಸುತ್ತಿದ್ದು ಪ್ರವಾಸಿಗರ ಸುರಕ್ಷತೆಯ ದೃಷ್ಠಿಯಿಂದ ನಿರ್ಬಂಧ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ