ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೇರುಂಡಿ ಗ್ರಾಮದ ಬಳಿ ಇರುವ ಕೃಷ್ಣ ನದಿಯಲ್ಲಿ ಅಕ್ರಮವಾಗಿ ಟ್ರ್ಯಾಕ್ಟರ್ ಗಳ ಮೂಲಕ ಮರಳು ಸಾಗಿಸುತ್ತಿದ್ದ ವೇಳೆ, ಖಚಿತ ಮಾಹಿತಿ ಮೇರೆಗೆ ದೇವದುರ್ಗ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿಗಳು ಇತ್ತೀಚೆಗೆ ದಾಳಿ ನಡೆಸಿ, ಐದು ಟ್ರಾಕ್ಟರ್ ಗಳನ್ನು ವಶಪಡಿಸಿಕೊಂಡ ಘಟನೆ ನಡೆದಿದೆ. ದಾಳಿ ಆಗುತ್ತಿದ್ದಂತೆ ಐದು ಚಾಲಕರು ಟ್ರ್ಯಾಕ್ಟರ್ ಬಿಟ್ಟು ಪರಾರಿಯಾಗಿದ್ದಾರೆ. ಟ್ರ್ಯಾಕ್ಟರ್ ಮತ್ತು ಮರಳು ವಶಪಡಿಸಿಕೊಂಡು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.