ಹೆಲೈಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ ಪಾಲನೆ ಮಾಡದಿರುವುದರಿಂದ ಅಪಘಾತ ಹಾಗೂ ಸಾವುಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಾಹನಗಳ ತಪಾಸಣೆಯ ನಿರಂತರವಾಗಿ ನಡೆಯಲಿದೆ. ಬೈಕ್ ಸೇರಿದಂತೆ ಇತರೆ ವಾಹನಗಳವರು ಅಗತ್ಯ ದಾಖಲೆ, ಚಾಲನ ಪರವಾನಗಿಯನ್ನು ಕಡ್ಡಾಯವಾಗಿ ಹೊಂದರಬೇಕು. ಜೊತೆಗೆ 2026 ಜ.1 ರಿಂದ ಹೆಲೈಟ್ ಧರಿಸದೆ ವಾಹನ ಚಲಾಯಿಸುವುದು ಕಂಡುಬಂದಲ್ಲಿ ಯಾವುದೇ ಮುಲಾಜಿಲ್ಲದೆ ಮೋಟಾರು ವಾಹನ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗುವುದು ಹಾಗೂ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಡಿವೈಎಸ್ಪಿ ಪಾಂಡುರಂಗ ತಿಳಿಸಿದ್ದರು.