ನಾಗಮಂಗಲ: ಪಟ್ಟಣದಲ್ಲಿ ಅ.17 ರಂದು ಗಣೇಶ ವಿಸರ್ಜನೆ ನಡೆಯುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ
ನಾಗಮಂಗಲ ಪಟ್ಟಣದ ಕೋಟೆ ಗಣೇಶ ದೇವಸ್ಥಾನದ ಪ್ರತಿಷ್ಠಾಪಿಸಲಾಗಿದ್ದ ಗಣೇಶ ವಿಸರ್ಜನೆ ಅ. 17 ರಂದು ನಡೆಯುವ ಹಿನ್ನೆಲೆಯಲ್ಲಿ ಸೋಮವಾರ ನಾಗಮಂಗಲದ ಡಿವೈಎಸ್ಪಿ ಕಚೇರಿಯಲ್ಲಿ ಶಾಂತಿ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಗಣೇಶ ಪ್ರತಿಷ್ಠಾಪನೆ ಆಯೋಜಕರು ಹಾಗೂ ಅಧಿಕಾರಿಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು ಗಣೇಶ ವಿಸರ್ಜನಾ ಸ್ಧಳದಲ್ಲಿ ಅವಶ್ಯಕವಾಗಿ ಬೇಕಾಗುವ ಸೂಕ್ತವಾದ ಬಂದೋಬಸ್ತ್ ಮಾಡಲಾಗುವುದು. ಈ ಸಂದರ್ಭದಲ್ಲಿ ಆಯೋಜಕರು ಕೂಡ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ನೀಡಿರುವ ಸೂಚನೆಗಳನ್ನು ಪಾಲಿಸಿ ಅಗತ್ಯವಾದ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.