ಸಿಂದಗಿ: ಬೋರಗಿಯಲ್ಲಿ 20 ಲಕ್ಷ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರದ ಬೋರಗಿ ಗ್ರಾಮದಲ್ಲಿ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ, 20 ಲಕ್ಷ ರೂಪಾಯಿ ವೆಚ್ಚದಲ್ಲಿ ಶ್ರೀ ಹಜರತ್ ಅಬ್ಬಾಸ್ ಅಲಿ ದರ್ಗಾ ಬಳಿ ಕಂಪೌಂಡ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ ಮನಗೂಳಿ ಶನಿವಾರ ಭೂಮಿಪೂಜೆ ನೆರವೇರಿಸಿದರು.