ಬೆಳಗಾವಿ: ನಗರದ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಲಿಂಗರಾಜ ಕಾಲೇಜು ವಿದ್ಯಾರ್ಥಿಗಳ ಭೇಟಿ ಜೈಲಿನ ಕಾರ್ಯದ ಕುರಿತು ಮಾಹಿತಿ ಪಡೆದ ವಿದ್ಯಾರ್ಥಿಗಳು
ನಗರದ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಲಿಂಗರಾಜ ಕಾಲೇಜು ವಿದ್ಯಾರ್ಥಿಗಳ ಭೇಟಿ ಜೈಲಿನ ಕಾರ್ಯದ ಕುರಿತು ಮಾಹಿತಿ ಪಡೆದ ವಿದ್ಯಾರ್ಥಿಗಳು. ಬೆಳಗಾವಿಯ ಕೆಎಲ್ಇ ಸಂಸ್ಥೆಯ ಲಿಂಗರಾಜ ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಶುಕ್ರವಾರ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದರು. ಅಲ್ಲಿನ ಆಡಳಿತ ವ್ಯವಸ್ಥೆ ಹಾಗೂ ಕೈದಿಗಳ ವಿವಿಧ ರೀತಿಯ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ಸಂಗ್ರಹಿಸಿದರು.ಕೇಂದ್ರ ಕಾರಾಗೃಹದ ಅಧೀಕ್ಷಕ ವಿ.ಕೃಷ್ಣ ಮೂರ್ತಿ ಅವರು ಕಾರಾಗೃಹದ ಅಡಳಿತ ವ್ಯವಸ್ಥೆಗಳ ಕುರಿತು ಮಾಹಿತಿ ನೀಡಿದರು