ದಾವಣಗೆರೆ: ಜಿಲ್ಲೆಯ ಅಭಿವೃದ್ಧಿ ಮಾಡದ ಸಂಸದರಿಗೆ ಕಾಂಗ್ರೆಸ್‌ನಿಂದ ಬೀಳ್ಕೊಡುಗೆ: ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ
20 ವರ್ಷ ದಾವಣಗೆರೆ ಜಿಲ್ಲೆಗೆ ಸಂಸದರಾಗಿದ್ದ ಜಿ.ಎಂ. ಸಿದ್ದೇಶ್ವರ ಅವರು ಯಾವುದೇ ಅಭಿವೃದ್ಧಿಯನ್ನು ಮಾಡಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ ಆಕ್ರೋಶ ಹೊರ ಹಾಕಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಗೆ ಸಂಸದರ ಕೊಡುಗೆ ಏನು.? ಅವರು ಮಾಡಿಸಿರುವ ಕಾಮಗಾರಿಗಳು ಕಳಪೆ ಹಾಗೂ ಅವೈಜ್ಞಾನಿಕವಾಗಿವೆ. ಮುಂದಿನ ದಿನಗಳಲ್ಲಿ ಅವರು ಮಾಡಿಸಿರುವ ಕಳಪೆ ಹಾಗೂ ಅವೈಜ್ಞಾನಿಕ ಕಾಮಗಾರಿಗಳ ವಿರುದ್ಧ ಜಿಲ್ಲಾ ಮಹಿಳಾ ಕಾಂಗ್ರೆಸ್‌ನಿಂದ ಪ್ರತಿಭಟನೆ ಮಾಡಲಾಗುವುದು ಎಂದು ದಿನೇಶ್ ಶೆಟ್ಟಿ ಹೇಳಿದರು.