BREAKING NEWS || ಟಿ. ನರಸೀಪುರದಲ್ಲಿ ಅಪಘಾತ: ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರ ಭೇಟಿ
ಮೈಸೂರು: ಟಿ. ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮೈಸೂರು–ಟಿ. ನರಸೀಪುರ ರಾಷ್ಟ್ರೀಯ ಹೆದ್ದಾರಿ NH-766ರ ಟೋಲ್ ಬಳಿ ಸಂಭವಿಸಿದ ರಸ್ತೆ ಅಪಘಾತದ ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಮಲ್ಲಿಕಾರ್ಜುನ ಬಾಲದಂಡಿ, ಐಪಿಎಸ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಪಘಾತ ಸಂಭವಿಸಿದ ಸ್ಥಳವನ್ನು ಪರಿಶೀಲಿಸಿದ ಜಿಲ್ಲಾ ಪೊಲೀಸ್ ಅಧೀಕ್ಷಕರು, ಘಟನೆಯ ಕುರಿತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಅಪಘಾತಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾಗಿರುವ ಪೊಲೀಸ್ ಕ್ರಮಗಳು ಹಾಗೂ ತನಿಖೆಯ ಪ್ರಗತಿ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ರಸ್ತೆ ಅಪಘಾತದ ನಿಖರ ಕಾರಣ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ವಿವಿಧ ಅಂಶಗಳನ್ನು ಪರಿಶೀಲಿಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಪಘಾತದ ಹಿನ್ನೆಲೆಯಲ್ಲಿ ಟಿ. ನರಸೀಪುರ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದ ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಮುಂದುವರಿಸಿದ್ದಾರೆ.
#TNarasipura #RoadAccident #Mysuru #NH766 #karnatakapolice1
Yadgir, Yadgir | Oct 4, 2026