ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಹಿನ್ನೆಲೆಗೆ ಸಂಬಂಧಿಸಿ ಮಂಗಳವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಸದಾಶಿವನಗರದಲ್ಲಿ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದು, ನಿನ್ನೆ ಆರೋಗ್ಯ ಸರಿಯಾಗಿರಲಿಲ್ಲದ ಕಾರಣ ವಿಶ್ರಾಂತಿಯಲ್ಲಿ ಇದ್ದೆ. ಮಧ್ಯಾಹ್ನ ಊಟದ ವೇಳೆ ಮಾಧ್ಯಮಗಳಲ್ಲಿ ಈ ವಿಷಯ ಪ್ರಸಾರವಾಗುತ್ತಿದೆ ಎಂದು ತಿಳಿದ ನಂತರ ಅಧಿಕಾರಿಗಳೊಂದಿಗೆ ಮಾತನಾಡಿ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದು, ಅವರು ಬಾದಾಮಿಯಲ್ಲಿ ಇದ್ದರೂ ಕೂಡ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಇಂತಹ ಘಟನೆಗಳು ಯಾವುದೇ ಇಲಾಖೆಯಲ್ಲೂ ನಡೆಯಬಾರದು ಎಂದು ಸ್ಪಷ್ಟಪಡಿಸಿದರು. ಗೌರವಕ್ಕೆ ಧಕ್ಕೆ ತರುವ ವಿಷಯವಾಗಿರುವುದರಿಂದ ಸಂಬಂಧಪಟ್ಟ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ,