ಬೆಂಗಳೂರು ಉತ್ತರ: ಬ್ಯಾಡರಹಳ್ಳಿ, ಅನ್ನಪೂರ್ಣೇಶ್ವರಿ ನಗರದಲ್ಲಿ ಪುಂಡರ ಅಟ್ಟಹಾಸಕ್ಕೆ ಇಪ್ಪತ್ತಕ್ಕೂ ಅಧಿಕ ವಾಹನಗಳು ಜಖಂ
ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ವಾಹನಗಳನ್ನ ಪುಂಡರು ಜಖಂಗೊಳಿಸಿರುವ ಘಟನೆ ಬ್ಯಾಡರಹಳ್ಳಿ ಹಾಗೂ ಅನ್ನಪೂರ್ಣೇಶ್ವರಿ ನಗರದ ವ್ಯಾಪ್ತಿಯಲ್ಲಿ ವರದಿಯಾಗಿದೆ. ಸೆಪ್ಟೆಂಬರ್ 25ರಂದು ಬೆಳಗ್ಗಿನ ಜಾವ 2 ಗಂಟೆ ಸುಮಾರಿಗೆ ಬಂದಿರುವ ನಾಲ್ಕೈದು ಜನ ಪುಂಡರು ವಾಲ್ಮೀಕಿ ನಗರ ಹಾಗೂ ಮುದ್ದಯ್ಯನಪಾಳ್ಯದಲ್ಲಿ ರಸ್ತೆ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಸುಮಾರು 20ಕ್ಕೂ ಅಧಿಕ ವಾಹನಗಳ ಮೇಲೆ ಮಾರಕಾಸ್ತ್ರ ಝಳಪಿಸಿದ್ದಾರೆ. ಕಿಡಿಗೇಡಿಗಳ ಅಟ್ಟಹಾಸಕ್ಕೆ ಬಲಿಯಾದ ವಾಹನಗಳ ಮಾಲೀಕರು ಕಣ್ಣೀರಿಟ್ಟಿದ್ದಾರೆ. ಬ್ಯಾಡರಹಳ್ಳಿ ಹಾಗೂ ಅನ್ನಪೂರ್ಣೇಶ್ವರಿ ನಗರ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.