ಗುಂಡ್ಲುಪೇಟೆ: ಪಟ್ಟಣದಲ್ಲಿ ಪುರಸಭೆ ಅಧ್ಯಕ್ಷರಾಗಿ
ಶಶಿಧರ್ ದೀಪು, ಉಪಾಧ್ಯಕ್ಷರಾಗಿ ಶ್ರೀನಿವಾಸ್ ಕಣ್ಣಪ್ಪ ಅವಿರೋಧ ಆಯ್ಕೆ
ಗುಂಡ್ಲುಪೇಟೆ ಪಟ್ಟಣದ ಪುರಸಭೆ ಅಧ್ಯಕ್ಷರಾಗಿ ಶಶಿಧರ್ ದೀಪು, ಉಪಾಧ್ಯಕ್ಷರಾಗಿ ಶ್ರೀನಿವಾಸ್ ಕಣ್ಣಪ್ಪ ಅವಿರೋಧವಾಗಿ ಆಯ್ಕೆಯಾದರು. ಪುರಸಭಾ ಕಾರ್ಯಾಲಯದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಶಶಿಧರ್ ದೀಪು, ಉಪಾಧ್ಯಕ್ಷ ಸ್ಥಾನಕ್ಕೆ ಶ್ರೀನಿವಾಸ್ ಕಣ್ಣಪ್ಪ ಹೊರತು ಪಡಿಸಿ ಇತರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆ ಚುನಾವಣಾಧಿಕಾರಿಯಾಗಿದ್ದ ತಹಸೀಲ್ದಾರ್ ತನ್ಮಯ್ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆಯನ್ನು ಸೋಮವಾರ ಘೋಷಣೆ ಮಾಡಿದರು.