ಶಿವಮೊಗ್ಗ: ಜಿಲ್ಲಾ ಬಿಜೆಪಿಯ ವೈದ್ಯಕೀಯ ಪ್ರಕೋಷ್ಟ ವತಿಯಿಂದ ನಗರದ ಮೆಗ್ಗಾನ್ ಆಸ್ಪತ್ರೆಗೆ ಭೇಟಿ
ಶಿವಮೊಗ್ಗ ಜಿಲಾ ಬಿಜೆಪಿ ವೈದ್ಯಕೀಯ ಪ್ರಕಾಶ್ದ ವತಿಯಿಂದ ಸೋಮವಾರ ಶಿವಮೊಗ್ಗ ನಗರದ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಜಿಲ್ಲೆಯಲ್ಲಿ ಹೆಚ್ಚಾಗಿ ಹರಡುತ್ತಿರುವಂತಹ ಡೆಂಗ್ಯೂ, ಚಿಕನ್ ಗುನ್ಯಾ, ಜಿಕಾ ವೈರಸ್ ಜ್ವರದ ಬಗ್ಗೆ ಮಾಹಿತಿಯನ್ನು ಪಡೆಯಲಾಯಿತು. ಬಳಿಕ ಅವಶ್ಯಕತೆ ಇರುವ ತುರ್ತು ಕ್ರಮಗಳ ಬಗ್ಗೆ ಜಾರಿಗೆ ಡಾಕ್ಟರ್ ತಿಮ್ಮಪ್ಪ ಅವರನ್ನು ಭೇಟಿ ಮಾಡಿ ಆಗ್ರಹಿಸಲಾಯಿತು. ಆಸ್ಪತ್ರೆಯ ಆವರಣದಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದು ಆಸ್ಪತ್ರೆಯ ವಾರ್ಡ್ನಲ್ಲಿ ಕೆಟಕಿಗಳಿಗೆ ಸೊಳ್ಳೆ ಪರದೆಗಳನ್ನ ಹಾಕಿಸುವುದು ಆಸ್ಪತ್ರೆ ಆವರಣ ಹಾಗೂ ಸುತ್ತಮುತ್ತಲು ಎಲ್ಲೂ ನೀರು ನಿಲ್ಲದೆ ಇರುವ ಹಾಗೆ ಕ್ರಮ ಕೈಕೊಳ್ಳುವಂತೆ ತಿಳಿಸಿದರು.