ಶಿರಾ: ಸಿರಾ ಹೆದ್ದಾರಿಯಲ್ಲಿ ಹಿಟ್ ಅಂಡ್ ರನ್: ನವದಂಪತಿ ದಾರುಣ ಸಾವು
Sira, Tumakuru | Sep 17, 2026 ರಾಷ್ಟ್ರೀಯ ಹೆದ್ದಾರಿ-48ರ ದ್ವಾರಾಳು ಸೇತುವೆ ಮೇಲೆ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಒಂದೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವದಂಪತಿ ಮೃತಪಟ್ಟಿದ್ದಾರೆ. ಬೈಕ್ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.