ಮಳವಳ್ಳಿ : ತಲೆಗೆ ತೀವ್ರ ಪೆಟ್ಟು ಬಿದ್ದು ಪ್ರಜ್ಞೆ ತಪ್ಪಿ ಬಿದ್ದಿದ್ದ. ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿ ಯಾಗದೆ ಸಾವನ್ನಪ್ಪಿರುವ ಘಟನೆ ತಾಲೂಕಿನ ಕ್ಯಾತೇಗೌಡನದೊಡ್ಡಿ ಗ್ರಾಮದ ಬಳಿ ಜರುಗಿದೆ. ಈ ಗ್ರಾಮದ ಸಮೃದ್ದಿ ಬಾರ್ ಮುಂಭಾಗ ಕಳೆದ ನವೆಂಬರ್ 26 ರಂದು ತಲೆಗೆ ತೀವ್ರ ಪೆಟ್ಟು ಬಿದ್ದು ಗಂಭೀರವಾಗಿ ಗಾಯಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದ ಈತನಿಗೆ ಪಟ್ಟಣದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಜಿಲ್ಲಾಸ್ಪ ತ್ರೆಗೆ ದಾಖಲಿಸಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋ ರಿಯಾ ಆಸ್ಪತ್ರೆಗೆ ದಾಖಲಿಸ ಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ತಡರಾತ್ರಿ ಮೃತಪಟ್ಟ ನೆಂದು ವರದಿಯಾಗಿದೆ.