ದಾಂಡೇಲಿ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿಯವರ ಮೇಲೆ ಶೂ ಎಸೆದ ಯತ್ನಿಸಿದ ವಕೀಲ ರಾಕೇಶ ಕಿಶೋರನಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ದಾಂಡೇಲಿಯ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಸಂಘಟನೆಗಳ ಒಕ್ಕೂಟದಿಂದ ಶನಿವಾರ ಸಂಜೆ 4.30 ಗಂಟೆಗೆ ನಗರದ ಸೋಮಾನಿ ವೃತ್ತದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಗೂ ಮುನ್ನ ನಗರಸಭೆಯ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಗೌರವ ನಮನಗಳನ್ನು ಸಲ್ಲಿಸಿ ಅಲ್ಲಿಂದ ನಗರದ ಸೋಮಾನಿ ವೃತ್ತದ ವರೆಗೆ ಪ್ರತಿಭಟನೆ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಯಿತು.