ಬೃಹನ್ ಮುಂಬೈ ಮಹಾನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿ ಭರ್ಜರಿ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಇಂದು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸಿಹಿ ವಿತರಿಸಿ ಸಂಭ್ರಮಾಚರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ವಕ್ತಾರರಾದ ಶ್ರೀ ಪ್ರಕಾಶ್ ಶೇಷರಾಘವಾಚಾರ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಶ್ರೀ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಶ್ರೀ ಸಪ್ತಗಿರಿ ಗೌಡ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದು, ಮಹಾಯುತಿ ಗೆಲುವನ್ನು ಹರ್ಷದಿಂದ ಆಚರಿಸಿದರು.