ರಾಮನಗರ ಜಿಲ್ಲೆಯ ಕಬ್ಬಾಳಮ್ಮ ದೇವಸ್ಥಾನದಲ್ಲಿ ಪೂಜೆಗೆ ಬಂದ ಭಕ್ತರ ಮೇಲೆ ಅರ್ಚಕರು ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ. ಕುಂಕುಮ ಕೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ಭಕ್ತರು ಮತ್ತು ಅರ್ಚಕರ ನಡುವೆ ಗಲಾಟೆ ನಡೆದಿದೆ ಎಂದು ಹೇಳಲಾಗಿದೆ.