ಕೋಗಿಲು ಅಕ್ರಮ ತೆರುವು ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಕೋಗಿಲು ಬಡಾವಣೆಯಲ್ಲಿ ಮನೆಗಳ ತೆರವು ಜಾಗಕ್ಕೆ ಸಚಿವ ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿ ಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಕ್ರಮ ಒತ್ತುವರಿಗೆ ಸಂಬಂಧಿಸಿ ಸುದೀರ್ಘವಾಗಿ ಅಧಿಕಾರಿಗಳಿಂದ ಹಾಗು ಅಲ್ಲಿನ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡ ಸಚಿವರು ನಂತರ ಮುಖ್ಯಮಂತ್ರಿ ಯವರ ಜತೆ ಚರ್ಚಿಸಿ ಪರ್ಯಾಯ ವ್ಯವವಸ್ಥೆಯ ಭರವಸೆ ನೀಡಿದರು.