ಮಂಡ್ಯ ಜಿಲ್ಲಾ ಕೇಂದ್ರದಲ್ಲಿ ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ 2 ಎಕರೆ ಜಾಗ ಕೇಳಿ ಮಂಡ್ಯ ಸಂಸದ ಹಾಗೂ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಜಿಲ್ಲಾಧಿಕಾರಿಗೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ, ಜಾಗ ನೀಡಲು ತಾವು ಸಿದ್ದ ಎಂದು ಮಂಡ್ಯ ಶಾಸಕ ರವಿಕುಮಾರ್ ಗಣಿಗ ತಿಳಿಸಿದ್ದಾರೆ. ಮಂಡ್ಯನಗರದ ಬಂದೀಗೌಡ ಬಡಾವಣೆಯ ತಮ್ಮ ನಿವಾಸದಲ್ಲಿ ಶುಕ್ರವಾರ ಮಧ್ಯಾಹ್ನ 12 ಗಂಟೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲೇ ಟ್ರಾಮಾ ಸೆಂಟರ್, ಸೂಪರ್ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಬೇಕೆಂಬುದು ಜನರ ಬಯಕೆಯಾಗಿದೆ. ಅದಕ್ಕೆ ರಾಜ್ಯ ಸರ್ಕಾರ ಸೂಕ್ತ ಜಾಗ ನೀಡಬೇಕು. ತುರ್ತಾಗಿ ಪ್ರಸ್ತಾವನೆಯೊಂದನ್ನು ಕಳುಹಿಸಿಕೊಡುವಂತೆ ರಾಜ್ಯ ಸರ್ಕಾರಕ್ಕ