ದಾಂಡೇಲಿ: ರೋಟರಿ ಶಾಲೆಯ ಸಭಾ ಭವನದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿನಿಯರಿಗೆ ಮುಟ್ಟಿನ ನೈರ್ಮಲ್ಯ ನಿರ್ವಹಣೆ ಕುರಿತು ಜಾಗೃತಿ ಕಾರ್ಯಕ್ರಮ
ದಾಂಡೇಲಿ : ನಗರದ ರೋಟರಿ ಕ್ಲಬ್ ಆಶ್ರಯದಡಿ ರೋಟರಿ ಶಾಲೆಯ ಸಭಾ ಭವನದಲ್ಲಿ ರೋಟರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಮುಟ್ಟಿನ ನೈರ್ಮಲ್ಯ ನಿರ್ವಹಣೆ ಜಾಗೃತಿ ಕಾರ್ಯಕ್ರಮವನ್ನು ಬುಧವಾರ ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದ ಕಾಗದ ಕಾರ್ಖಾನೆಯ ಆಸ್ಪತ್ರೆಯ ವೈದ್ಯೆ ಡಾ.ಪ್ರಿಯಾಂಕಾ ಮೀಸಾಲೆ ಅವರು ಮುಟ್ಟಿನ ನೈರ್ಮಲ್ಯ, ಆರೋಗ್ಯ ನಿರ್ವಹಣೆ ಮತ್ತು ಮುಟ್ಟಿನ ಸುತ್ತಲಿನ ಪುರಾಣಗಳು ಮತ್ತು ತಪ್ಪು ಕಲ್ಪನೆಗಳನ್ನು ಮುರಿಯುವ ಬಗ್ಗೆ ಅಗತ್ಯ ಮಾರ್ಗದರ್ಶನ ನೀಡಿದರು. ಪ್ರತಿಯೊಬ್ಬರೂ ಸ್ವಚ್ಛತೆಗೆ ವಿಶೇಷ ಆದ್ಯತೆಯನ್ನು ನೀಡಬೇಕು. ಪೌಷ್ಟಿಕಾಂಶಯುಕ್ತ ಆಹಾರ ಸೇವನೆಗೆ ಒತ್ತು ನೀಡಬೇಕೆಂದು ಕರೆ ನೀಡಿದರು.