ಬಸವನ ಬಾಗೇವಾಡಿ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಕುಂದು ಕೊರತೆ ಸಭೆ ನಡೆಸಿದ ಪೊಲೀಸ್ ಅಧಿಕಾರಿಗಳು
ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ಪೊಲೀಸ ಠಾಣೆಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರ ಕುಂದು ಕೊರತೆ ಸಭೆ ಗುರುವಾರ ಸಾಯಂಕಾಲ 5ಗಂಟೆ ಸುಮಾರಿಗೆ ಜರುಗಿತು.ಈ ಸಂದರ್ಭದಲ್ಲಿ ಡಿಎಸ್ ಎಸ್ ಮುಖಂಡ ಗುರು ಗುಡಿಮನಿ ಮಾತನಾಡಿ ಗ್ರಾಮೀಣ ಭಾಗದಲ್ಲಿ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಾರೆ ಅಭಕಾರಿ ಇಲಾಖೆ ಮಾಮೂಲು ಪಡೆಯುತ್ತಿದ್ದಾರೆ ಎಂಭ ಅನುಮಾನವಿದೆ, ದಲಿತ ವರ್ಗದ ಜನರು ಕೆಲ ಭಾಗದಲ್ಲಿ ದಾರಿ ಸಮಸ್ಯ ಎದುರಿಸುತ್ತಿದ್ದಾರೆ ಸರಿ ಪಡಿಸುವಂತೆ ಸಭೆ ಗಮನಕ್ಕೆ ತಂದರು. ಕುಂದು ಕೊರತೆ ಸಭೆಯಲ್ಲಿ ದಲಿತ ಸಂಘಟನೆಯ ಮುಖಂಡರುಗಳು ಹಾಗೂ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದರು.