ಶಿವಮೊಗ್ಗ: ಸಾಗರದ ಶರಾವತಿ ಹಿನ್ನೀರಿನ ಹಸಿರುಮಕ್ಕೆ ಲಾಂಚ್ ಸೇವೆ ಪುನರಾರಂಭ
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನ ಹಸಿರುಮಕ್ಕೆ ಲಾಂಚ್ ಸೇವೆ ಗುರುವಾರ ಆರಂಭಗೊಂಡಿದೆ. ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಕುಸಿತ ಹಿನ್ನೆಲೆ ಲಾಂಚ್ ಸೇವೆ ಸ್ಥಗಿತಗೊಳಿಸಲಾಗಿತ್ತು. ಜಲಾಶಯಕ್ಕೆ ನೀರಿನ ಹರಿವು ಬಂದ ಹಿನ್ನೆಲೆ ಲಾಂಚ್ ಸೇವೆ ಪುನರಾರಂಭಿಸಲಾಗಿದೆ ಎಂದು ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನ ಲಾಂಚ್ ಸೇವೆಯನ್ನೇ ಅವಲಂಬಿಸಿದ್ದ ಸ್ಥಳೀಯ ಗ್ರಾಮಸ್ಥರು ಹಾಗೂ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ತೆರಳುವ ಭಕ್ತರು ಹರ್ಷ ವ್ಯಕ್ತಪಡಿಸಿದ್ದಾರೆ