ಬೆಂಗಳೂರು ಉತ್ತರ: ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆ ಬಂಧನ
ಅವಲಹಳ್ಳಿ ಪೊಲೀಸರು ಲೈಬೇರಿಯಾ ಮೂಲದ ಕೌಂದ್ ಪ್ರಿನ್ಸ್ ಎಂಬ ವಿದೇಶಿ ಪ್ರಜೆಯನ್ನು 1.6 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಕಮ್ಮಸಂದ್ರದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿ ಒಂದು ತಿಂಗಳ ಹಿಂದೆ ಬ್ಯುಸಿನೆಸ್ ವೀಸಾದಲ್ಲಿ ಬೆಂಗಳೂರಿಗೆ ಬಂದಿದ್ದು, ದೆಹಲಿಯ ಮೂಲದ ಪೆಡ್ಲರ್ ಜೊತೆಗೂಡಿ ಡ್ರಗ್ಸ್ ಮಾರಾಟ ಮಾಡುತ್ತಿದ್ದನು. ಇತ್ತೀಚೆಗೆ ದೆಹಲಿ ಪೊಲೀಸರು ಪೆಡ್ಲರ್ ಒಬ್ಬನನ್ನು ಬಂಧಿಸಿದ್ದು, ಆತನ ಮನೆಯಲ್ಲಿ ಕೋಟಿ ಕೋಟಿ ಮೌಲ್ಯದ ಎಂಡಿಎಂಎ ಡ್ರಗ್ಸ್ ಪತ್ತೆಯಾಗಿತ್ತು.