ಹಳಿಯಾಳ: ತಾ.ಪಂ ಸಭಾ ಭವನದಲ್ಲಿ ತಾಲೂಕಿನ ಪ್ರಗತಿ ಪರಿಶೀಲನಾ ಸಭೆ
ಹಳಿಯಾಳ : ತಾಲೂಕಿನ ವಿವಿಧ ಇಲಾಖೆಗಳ ಅಡಿಯಲ್ಲಿ ನಡೆದ ಕಾಮಗಾರಿ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಕುರಿತಾಗಿ ಹಳಿಯಾಳದ ತಾಲೂಕು ಪಂಚಾಯತ್ ಸಭಾಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾ ಪಂಚಾಯತ್ ಅಭಿವೃದ್ಧಿ ವಿಭಾಗದ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರು ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಸಂಜೆ 5:00 ಗಂಟೆ ಸುಮಾರಿಗೆ ಸಂಪನ್ನಗೊಂಡಿತು. ವೇದಿಕೆಯಲ್ಲಿ ತಾ.ಪಂ ಇ.ಓ ವಿಲಾಸ್ ರಾವ್, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ನಿರ್ದೇಶಕರಾದ ದಾಸನಕೊಪ್ಪ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಪಿ.ಐ ಮಾನೆ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಎ.ಆರ್.ಹೇರಿಯಾಳ ಮೊದಲಾದವರು ಉಪಸ್ಥಿತರಿದ್ದರು.