ಯಲ್ಲಾಪುರ:ಮೃತ ರಂಜಿತಾ ಕುಟುಂಬಕ್ಕೆ 2 ಎಕರೆ ಜಮೀನು,50 ಲಕ್ಷ ರೂ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಒತ್ತಾಯಿಸಿದರು. ಅವರು ಪಟ್ಟಣದ ಕಾಳಮ್ಮನಗರದಲ್ಲಿ ಕೊಲೆಯಾದ ರಂಜಿತಾ ಮನೆಗೆ ರವಿವಾರ ಸಂಜೆ ಭೇಟಿ ನೀಡಿ, ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ನಂತರ ಮಾತನಾಡಿ ದಲಿತಹಿಂದೂ ಮಹಿಳೆ ಹತ್ಯೆಯನ್ನು ಬಲವಾಗಿ ಖಂಡಿಸುತ್ತೇನೆ ಎಂದರು.