ಯಲ್ಲಾಪುರ :ತಾಲೂಕಿನ ಗುಳ್ಳಾಪುರ ಬಳಿ ಖಾಸಗಿ ಬಸ್ ಒಂದು ಚಲಿಸುತ್ತಿದ್ದ ಟ್ಯಾಂಕರ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಚಾಲುಕ್ಯ ಬಸ್ ಚಾಲಕನ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ಇದರಿಂದ ಬಸ್ನ ಮುಂಭಾಗ ಹಾಗೂ ಟ್ಯಾಂಕರ್ ನ ಹಿಂಭಾಗ ಜಖಮಗೊಂಡಿದೆ. ಬಸ್ ನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.