ಸಿರವಾರ: ಕಲ್ಮಠದಲ್ಲಿ ವಿವಿಧ ಸಾಧಕರಿಗೆ ಸನ್ಮಾನ ಹಿನ್ನೆಲೆ ಕವಿತಾಳ ಪಟ್ಟಣದಲ್ಲಿ ಮನೆ ಮನೆಗೆ ಭೇಟಿ ನೀಡಿ ಸಮಾರಂಭಕ್ಕೆ ಆಗಮಿಸುವಂತೆ ಸ್ವಾಮೀಜಿ ಮನವಿ
Sirwar, Raichur | Mar 30, 2024 ಕಲ್ಮಠದಲ್ಲಿ ನಡೆಯುತ್ತಿರುವ ವಿವಿಧ ಕಾರ್ಯಕ್ರಮಗಳಲ್ಲಿ ಎಲ್ಲರೂ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಕಲ್ಮಠದ ಅಭಿನವ ಸಿದ್ದಲಿಂಗ ಸ್ವಾಮೀಜಿ ಹೇಳಿದರು. ಅವರು, ಕವಿತಾಳ ಪಟ್ಟಣದಲ್ಲಿ ಮನೆ ಮನೆಗೆ ಭೇಟಿ ನೀಡಿ ಸಮಾರಂಭಕ್ಕೆ ಆಗಮಿಸುವಂತೆ ಮಾ.30ರ ಶನಿವಾರ ಸ್ವಾಮೀಜಿ ಮನವಿ ಮಾಡಿದರು. ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳ ಭಕ್ತರಿಗೆ ಆಹ್ವಾನ ನೀಡುವುದಾಗಿ ತಿಳಿಸಿದರು. ಪ್ರತಿ ದಿನ ಸಂಜೆ ಗುಡ್ಡಾಪುರ ದಾನಮ್ಮ ದೇವಿ ಪುರಾಣ ಪ್ರವಚನ ನಡೆಯುತ್ತಿದೆ. ಮಾ. 31ರಂದು ಇಂಡಿಯಾ ಬುಕ್ ಆಫ್ ರೆಕಾರ್ಡ್ ಖ್ಯಾತಿಯ ಮಹನ್ಯ ಗುರು ಪಾಟೀಲ ತಂಡದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.