ಮುಂಡಗೋಡ ತಾಲೂಕಿನ ಸಾಲಗಾಂವ ಗ್ರಾಮದ ಶ್ರೀ ಬಾಣಂತಿದೇವಿ ಜಾತ್ರಾ ಸಂಭ್ರಮದಿಂದ ನಡೆಯಿತು. ಶುಕ್ರವಾರ ಸಂಜೆ 6.30ರವರೆಗೆ ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂರ್ಭದಲ್ಲಿ ಶಾಸಕ ಶಿವರಾಮ್ ಹೆಬ್ಬಾವ ಅವರು ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಿ ಕ್ಷೇತ್ರದ ಜನತೆಯ ಒಳಿತಿಗಾಗಿ ವಿಶೇಷ ಪೂಜೆಯನ್ನು ಸಲ್ಲಿಸಿದ ಶಾಸಕರು, ದೇವಿಯ ಆಶೀರ್ವಾದದಿಂದ ತಾಲೂಕು ಮತ್ತಷ್ಟು ಪ್ರಗತಿಯ ಹಾದಿಯಲ್ಲಿ ಸಾಗಲಿ ಎಂಬ ಆಶಯ ವ್ಯಕ್ತಪಡಿಸಿದರು.