ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ ಸಂಬಂದ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿತ್ತು. ಸೋಮವಾರ 12 ಗಂಟೆಗೆ ಸಭೆ ಹಮ್ಮಿಕೊಂಡಿದ್ದು ಜಿಲ್ಲಾಧಿಕಾರಿ ಟಿ ವೆಂಕಟೇಶ್ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ್ದು ಬರುವ ಜನವರಿ 26 ರಂದು ಗಣರಾಜ್ಯೋತ್ಸವವನ್ನು ಜಿಲ್ಲಾ ಕೇಂದ್ರದಲ್ಲಿ ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಿಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು