ಬಂಟ್ವಾಳ: ಪಾಣೆಮಂಗಳೂರು: ನರಿಕೊಂಬು-ಶಂಭೂರು ರಸ್ತೆ ಕಾಮಗಾರಿ ಅವ್ಯವಸ್ಥೆ ವಿರುದ್ಧ ದೂರು
ಪಾಣೆಮಂಗಳೂರಿನಲ್ಲಿ ನಡೆಯುತ್ತಿರುವ ನರಿಕೊಂಬು-ಶಂಭೂರು ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಯಲ್ಲಿನ ಅವ್ಯವಸ್ಥೆ ಬಗ್ಗೆ ಮಾಜಿ ಸಚಿವ ಬಿ.ರಮಾನಾಥ ರೈ ಅವರಿಗೆ ಸಾರ್ವಜನಿಕರು ದೂರು ನೀಡಿದ್ದಾರೆ. ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.