ಬೆಂಗಳೂರು ಉತ್ತರ: ಗಾಂಧಿನಗರದಲ್ಲಿ ವೈಟ್ ಟಾಪಿಂಗ್ ಕಾಮಗಾರಿಗೆ ಚಾಲನೆ ನೀಡಿದ ಸಿಎಂ
ಗಾಂಧಿನಗರ ವಿಧಾನಸಭಾ ಕ್ಷೇತ್ರದ ಎಂಟು ಪ್ರಮುಖ ರಸ್ತೆಗಳಲ್ಲಿ ವೈಟ್ ಟ್ಯಾಪಿಂಗ್ ಕಾಮಗಾರಿಗೆ ಸಿಎಂ ಸಿದ್ದರಾಮಯ್ಯ ಮಂಗಳವಾರ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗೃಹ ಸಚಿವ ದಿನೇಶ್ ಗುಂಡೂರಾವ್ ಈ ಸಂದರ್ಭದಲ್ಲಿ ಭಾಗವಹಿಸಿದ್ದರು. ಜಿಬಿಎ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.