ಹುಲಸೂರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೊಗುತಿದ್ದ ಮಹಿಳೆಯರಿಗೆ ಬೈಕ್ ಡಿಕ್ಕಿಯಾಗಿ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಬೇಲೂರ ಗ್ರಾಮದ ಬಳಿ ಜರುಗಿದೆ. ಬಾಬು ಲಾಂಡಗೆ(48) ಘಟನೆಯಲ್ಲಿ ಮೃತಪಟ್ಟ ಬೈಕ್ ಸವಾರನಾಗಿದ್ದಾನೆ. ಸುದ್ದಿ ತಿಳಿದ ಹುಲಸೂರ ಠಾಣೆ ಪೊಲೀಸರ ತಂಡ ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿದ್ದು, ತನಿಖೆ ಮುಂದುವರೆಸಿದ್ದಾರೆ